ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಕಾರು ಡಿಕ್ಕಿ

0

ಬ್ಯಾರಿಕೇಡ್ ಬಳಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಕಾನ್ಸ್​ಟೇಬಲ್‌ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶದಲ್ಲಿ ಇಂತಹದೊಂದು ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನೂ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಗಾಯಗೊಂಡವರು ಕನ್ನಾಟ್ ಪ್ಲೇಸ್ ಪೊಲೀಸ್​ ಠಾಣೆಯ ಕಾನ್ಸ್​ಟೇಬಲ್​ ವರದಿಯಿಂದ ತಿಳಿದುಬಂದಿದೆ. ಕಾನ್ಸ್​ಟೇಬಲ್ ಸರ್ಕಲ್ ನಲ್ಲಿ ವಾಹನಗಳ ತಪಾಸಣೆ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ವೇಗವಾಗಿ ಬಂದ ಎಸ್​ಯುವಿ ಡಿಕ್ಕಿ ಹೊಡೆದು ಪರಾರಿಯಾಗಿದೆ. 

ಅಲ್ಲೇ ಇದ್ದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾರು ಹಿಂಬಾಲಿಸಿದ್ದಾರೆ. ಸ್ವಲ್ಪ ದೂರದವರೆಗೆ ಕಾರು ಹಿಂಬಾಲಿಸಿದ್ದ ಪೊಲೀಸ್​ ಸಿಬ್ಬಂದಿ ಆರೋಪಿ ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಕ್ಟೋಬರ್ 24ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ಸ್ಥಳೀಯರ ಸಹಾಯದಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.