ಕಾಂಗ್ರೆಸ್ ಸರ್ಕಾರದ ವಿರುದ್ಧ ತಾರತಮ್ಯ ನೀತಿ ವಿರೋಧಿಸಿ, ಬಿಜೆಪಿಯಿಂದ ಪ್ರತಿಭಟನೆ..!

0

ಕಾಂಗ್ರೆಸ್ ಸರ್ಕಾರದ ವಿರುದ್ಧ ತಾರತಮ್ಯ ನೀತಿ ವಿರೋಧಿಸಿ, ಬಿಜೆಪಿಯಿಂದ ಪ್ರತಿಭಟನೆ..!

ಕಾಗವಾಡ, ಅಥಣಿ ಮತಕ್ಷೇತ್ರದ ಜನಪ್ರತಿಧಿಗಳು ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸದೇ, ದ್ವೇಷ, ದಬ್ಬಾಳಿಕೆ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಮಂಜೂರು ಮಾಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಅಡತಡೆ ಮಾಡುತ್ತಿದ್ದಾರೆಂದು ಮಾಜಿ ಸಚಿವ ಹಾಲಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದ್ದಾರೆ.

ಅವರು ರವಿವಾರ ಜ. 21 ರಂದು ಕಾಗವಾಡ ಪಟ್ಟಣದ ಚೆನ್ನಮ್ಮಾ ವೃತ್‌ದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ನೇತೃತ್ವದಲ್ಲಿ ಕಾಗವಾಡ, ಅಥಣಿ ಜನಪ್ರತಿನಿಧಿಗಳ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಶಾಸಕರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಅಭಿವೃದ್ಧಿ ಕಾರ್ಯದಲ್ಲಿ ತಾರತಮ್ಯ ಮಾಡುತ್ತಿದ್ದು, ಇದು ನಿಲ್ಲಬೇಕು. ಇಲ್ಲವಾದರೇ ಮುಂದಿನ ದಿನಮಾನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ಕ್ಷೇತ್ರದಲ್ಲಿಯ ಗ್ರಾಮ ಪಂಚಾಯತಿಗಳಿಗೆ ಸರ್ಕಾರದಿಂದ ಮಂಜೂರಾದ ಮನೆ ಹಂಚಿಕೆಯಲ್ಲಿ ಸ್ಥಳೀಯ ಶಾಸಕರು ತಾರತಮ್ಯ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸಿದವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ದಬ್ಬಾಳಿಕೆ ನಡೆಸಲಾಗುತ್ತಿದೆ. ನಮ್ಮ ಅವಧಿಯಲ್ಲಿ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತಡೆ ಹಿಡಯಲಾಗಿದೆ. ಬಸವೇಶ್ವರ ಏತ ನೀರಾವರಿ ಯೋಜನೆ ಕಾಮಗಾರಿ ಕುಂಟುತ್ತಾ ಸಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಪೋಲಿಸ್‌ರ ಮತ್ತು ಕಾರ್ಯಕರ್ತರ ಮಧ್ಯೆ ಕೆಲಹೊತ್ತು ಮಾತಿನ ಚಕಮಕಿ ಉಂಟಾಯಿತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರ ಪರವಾಗಿ ಅನ್ಯಾಯದ ವಿರುದ್ಧ ಪೋಲಿಸ್ ಇಲಾಖೆ ಯಾರ ಒತ್ತಡಕ್ಕೂ ಒಳಗಾಗದೇ ತಪ್ಪಿಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮನವಿ ಸಲ್ಲಿಸಲಾಯಿತು.

ಈ ಸಮಯದಲ್ಲಿ ಮಾಜಿ ಶಾಸಕ ಮಹೇಶ ಕುಮಟಳ್ಳಿ, ಮುಖಂಡರಾದ ಶ್ರೀನಿವಾಸ ಪಾಟೀಲ, ದಾದಾ ಪಾಟೀಲ, ಆರ್.ಎಂ. ಪಾಟೀಲ, ಮಹಾದೇವ ಕೋರೆ, ರಾಜ ಸೊಡ್ಡಿ, ಅಭಯ ಅಕಿವಾಟೆ, ಶಿವಾನಂದ ಪಾಟೀಲ, ಅರುಣ ಗಣೇಶವಾಡಿ, ರಾಮಗೌಡಾ ಪಾಟೀಲ, ಮನೋಜ ಕುಸನಾಳೆ, ಸುನೀಲ ಶಿಂಧೆ, ಕಾಗವಾಡ ಬ್ಲಾಕ್ ಬಿಜೆಪಿ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ, ಉಪಾಧ್ಯಕ್ಷ ರಾಕೇಶ ಪಾಟೀಲ, ಸುಜಯ ಫರಾಕಟ್ಟೆ, ಅರುಣ ಜೋಶಿ, ನೇತಾಜಿ ಕಾಟೆ ಸೇರಿದಂತೆ ಅನೇಕ ಮುಖಂಡರು, ಸಾವಿರಾರು ಸಂಖ್ಯೆಯ ಬಿಜೆಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪೋಟೊ ಶಿರ್ಷಿಕೆ: 21 (ಕಾಗವಾಡ -1) ಕಾಗವಾಡ ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡುತ್ತಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಮಹೇಶ ಕುಮಟಳ್ಳಿ ಹಾಗೂ ಇತರರ ಚಿತ್ರ.