ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿಯ ಸೊಸೆ ಆತ್ಮಹತ್ಯೆಗೆ ಶರಣು.!

0

ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿಯ ಸೊಸೆ ಆತ್ಮಹತ್ಯೆಗೆ ಶರಣು.!

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿಯ ಸೊಸೆ ಬೆಂಗಳೂರಿನಲ್ಲಿ ಸಾವಿಗೆ ಶರಣಾದ ಘಟನೆ ನಡೆದಿದೆ.

ಐಶ್ವರ್ಯ (23) ಎಂಬುವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಕನಕಮಜಲು ಗ್ರಾಮದ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರನ್ನು ಐಶ್ವರ್ಯ ಮದುವೆ ಮಾಡಿಕೊಂಡಿದ್ದರು.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಐಶ್ವರ್ಯ ಮನೆಯಲ್ಲಿ ಯಾರು ಇಲ್ಲದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಐಶ್ವರ್ಯ ಅವರ ಮೃತದೇಹ ಸುಳ್ಯಕ್ಕೆ ಬರಲಿದ್ದು, ಕನಕಮಜಲಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿದು ಬಂದಿದೆ.